ದೆಹಲಿ/ಹೈದರಾಬಾದ್:ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸುತ್ತಿದ್ದು ಈಗಾಗಲೇ 100ಕ್ಕೂ ಹೆಚ್ಚು ಜನರನ್ನು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಕೇರಳ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು ಸೇರಿದಂತೆ ದೇಶದ ವಿವಿಧೆಡೆ ಇರುವ ಪಿಎಫ್ಐ ಕಚೇರಿಗಳ ಮೇಲೆ ಅಧಿಕಾರಿಗಳು ದಾಖಲೆಗಳ ಶೋಧ ನಡೆಸುತ್ತಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಒಟ್ಟು 11 ರಾಜ್ಯಗಳ ಪಿಎಫ್ಐ ಕಚೇರಿ ಹಾಗೂ ಸದಸ್ಯರ ನಿವಾಸಗಳ ಮೇಲೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, 106 ಪಿಎಫ್ಐ ಕಾರ್ಯಕರ್ತರನ್ನು ಅರೆಸ್ಟ್ ಮಾಡಲಾಗಿದೆ.
ಎಲ್ಲೆಲ್ಲಿ ಎಷ್ಟು ಪಿಎಫ್‌ಐ ಕಾರ್ಯಕರ್ತರ ಬಂಧನ?: ಕೇರಳದಲ್ಲಿ 22, ಕರ್ನಾಟಕ 20, ಮಹಾರಾಷ್ಟ್ರ 20, ಆಂಧ್ರಪ್ರದೇಶ 5, ಅಸ್ಸೋಂ 9, ದೆಹಲಿ 3, ಮಧ್ಯಪ್ರದೇಶ 4, ಪುದುಚೇರಿ 3, ತಮಿಳುನಾಡು 10, ಉತ್ತರ ಪ್ರದೇಶ 8 ಹಾಗೂ ರಾಜಸ್ಥಾನದಲ್ಲಿ ಇಬ್ಬರು ಪಿಎಫ್‌ಐ ಕಾರ್ಯಕರ್ತರು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.