ಕರ್ನಾಟಕ

karnataka

ETV Bharat / bharat

G20 ಸಭೆಗೂ ಮುನ್ನ ಜಮ್ಮು ಕಾಶ್ಮೀರದಾದ್ಯಂತ ಮತ್ತೆ ಎನ್‌ಐಎ ದಾಳಿ - ಭಯೋತ್ಪಾದಕ ಸಂಘಟನೆಗಳಿಗೆ ಸಹಕಾರ

ಇಂದು ಬೆಳಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯು ಜಮ್ಮು ಮತ್ತು ಕಾಶ್ಮೀರ ಜಿಲ್ಲೆಯ 16 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

NIA
ಜಮ್ಮು ಮತ್ತು ಕಾಶ್ಮೀರ

By

Published : May 20, 2023, 10:40 AM IST

ಶ್ರೀನಗರ (ಜಮ್ಮು ಕಾಶ್ಮೀರ) :ಶ್ರೀನಗರದಲ್ಲಿ ನಡೆಯಲಿರುವ ಜಿ 20 ಸಭೆಗೂ ಮುನ್ನವೇ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಮ್ಮು ಮತ್ತು ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಸಹಕಾರ ನೀಡುತ್ತಿರುವ ಶಂಕಿತ ಸಹಚರರು ಮತ್ತು ಓವರ್‌ಗ್ರೌಂಡ್ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಕಾಶ್ಮೀರ ವಿಭಾಗದ ಶ್ರೀನಗರ, ಪುಲ್ವಾಮಾ, ಕುಪ್ವಾರ, ಅವಂತಿಪೋರಾ ಮತ್ತು ಅನಂತನಾಗ್‌ನ 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಮತ್ತು ಜಮ್ಮು ವಿಭಾಗದ ಹಲವಾರು ಸ್ಥಳಗಳಲ್ಲಿ ಶೋಧ ತೀವ್ರಗೊಳಿಸಲಾಗಿದೆ.

ಮೂಲಗಳ ಪ್ರಕಾರ, ಎನ್‌ಐಎ ಅಧಿಕಾರಿಗಳು ದಕ್ಷಿಣ ಕಾಶ್ಮೀರದ ಗೂಸು, ನೆಹ್ಮಾ ಮತ್ತು ದಫರ್‌ಪುರ ಪ್ರದೇಶಗಳಲ್ಲಿ ಸಹ ದಾಳಿ ನಡೆಸಿದ್ದಾರೆ. ಜಮಾತ್-ಎ-ಇಸ್ಲಾಮಿ (JeI) ಗೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ದಾಳಿ ನಡೆಸಲಾಗಿದ್ದು, ಶಂಕಿತ ಆರೋಪಿಗಳ ಬಳಿ ಇದ್ದ ದಾಖಲೆಗಳು, ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ಪರಿಶೀಲಿಸಲಾಗುತ್ತಿದೆ.

ಇಂದು ಬೆಳಗ್ಗೆ ಪುಲ್ವಾಮಾ ಜಿಲ್ಲೆಯಲ್ಲಿ ಎನ್‌ಐಎ ದಾಳಿ ಪ್ರಾರಂಭಿಸಿದಾಗ ಭದ್ರತಾ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಸಿಆರ್‌ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಪಡೆಯನ್ನು ನಿಯೋಜಿಸಲಾಗಿತ್ತು. ಕಳೆದ ಕೆಲ ದಿನಗಳ ಹಿಂದಷ್ಟೇ ರಾಷ್ಟ್ರೀಯ ತನಿಖಾ ಸಂಸ್ಥೆಯು ಭಯೋತ್ಪಾದಕರಿಗೆ ಆರ್ಥಿಕ ಸಹಾಯ ನೀಡುವ ಕೇಸ್​ಗೆ ಸಂಬಂಧಿಸಿದಂತೆ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ ಹೆಚ್ಚಿನ ತನಿಖೆಗಾಗಿ ಮೂವರನ್ನು ವಶಕ್ಕೆ ಪಡೆದ ಎನ್‌ಐಎ, ಇಂದು ಮತ್ತೆ ದಾಳಿ ಮುಂದುವರೆಸಿದೆ.

ಮೇ 22 ರಿಂದ 24 ರವರೆಗೆ ಶ್ರೀನಗರದಲ್ಲಿ ಜಿ 20 ಪ್ರವಾಸೋದ್ಯಮದ ವರ್ಕಿಂಗ್ ಗ್ರೂಪ್ ಸಭೆ ಕರೆಯಲಾಗಿದೆ. ಜಿ20 ಸಭೆಗೂ ಮುಂಚಿತವಾಗಿ ಎನ್‌ಐಎ ತನ್ನ ದಾಳಿಗಳನ್ನು ತೀವ್ರಗೊಳಿಸಿದ್ದು, ಕಳೆದ ಮೂರು ವಾರಗಳಲ್ಲಿ ತನಿಖಾ ತಂಡವು ಭಯೋತ್ಪಾದನೆಗೆ ಸಂಬಂಧಿಸಿದವರನ್ನು ನಿಯಂತ್ರಿಸಲು ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಇಂದು ನಡೆಸಲಾದ ದಾಳಿಯು ಕಣಿವೆಯಲ್ಲಿ ತಮ್ಮ ಒಜಿಡಬ್ಲ್ಯೂ (ಓವರ್-ಗ್ರೌಂಡ್ ವರ್ಕರ್ಸ್) ಮತ್ತು ಕೇಡರ್‌ಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳ ಚಟುವಟಿಕೆಗಳ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಭಯೋತ್ಪಾದಕ ಸಂಘಟನೆಗಳಲ್ಲಿ ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಮತ್ತು ಕಾಶ್ಮೀರ (ULFJ&K) ಹಾಗೂ ಜಮ್ಮು ಮತ್ತು ಕಾಶ್ಮೀರ ಸ್ವಾತಂತ್ರ್ಯ ಹೋರಾಟಗಾರರು (JKFF) ಸೇರಿವೆ.

ಇದನ್ನೂ ಓದಿ :ಬೆಳ್ಳಂಬೆಳಗ್ಗೆ ಆರು ರಾಜ್ಯಗಳ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ದಾಳಿ

ಕಳೆದ ಮೂರು ದಿನಗಳ ಹಿಂದಷ್ಟೇ (ಮೇ 17 ರಂದು) ಬಯೋತ್ಪಾದಕರು, ಮಾದಕ ವಸ್ತು ಕಳ್ಳಸಾಗಣೆದಾರರು ಮತ್ತು ದರೋಡೆಕೋರರ ಜೊತೆಗಿನ ನಂಟು ಪ್ರಕರಣಗಳಿಗೆ ಸಂಬಂಧಿಸಿದಂತೆ ಹರಿಯಾಣ, ಪಂಜಾಬ್, ರಾಜಸ್ಥಾನ, ಯುಪಿ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯಗಳ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ದಾಳಿ ಮಾಡಿತ್ತು. ಕ್ರಿಮಿನಲ್ ಕೇಸ್​ ಹೊಂದಿರುವವರ ಮನೆಗಳ ಎನ್‌ಐಎ ಕಣ್ಣಿಟ್ಟಿದೆ ಎಂದು ಮೂಲಗಳು ತಿಳಿಸಿದ್ದವು. ಇದರ ಮುಂದುವರೆದ ಭಾಗವಾಗಿ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.

ABOUT THE AUTHOR

...view details