ಕರ್ನಾಟಕ

karnataka

ETV Bharat / bharat

ಉದಯಪುರ ಹತ್ಯೆ ಪ್ರಕರಣ:  ಅಮಿತ್ ಶಾ ಭೇಟಿ ಮಾಡಿ ಮಾಹಿತಿ ಕೊಟ್ಟ ಎನ್‌ಐಎ ಮುಖ್ಯಸ್ಥ

ಎನ್‌ಐಎ ಮುಖ್ಯಸ್ಥ ದಿನಕರ್ ಗುಪ್ತಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.

ಅಮಿತ್ ಶಾ ಭೇಟಿ ಉದಯಪುರ ಹತ್ಯೆ ಕುರಿತು ಮಾಹಿತಿ ನೀಡಿದ ಎನ್‌ಐಎ ಮುಖ್ಯಸ್ಥ
ಅಮಿತ್ ಶಾ ಭೇಟಿ ಉದಯಪುರ ಹತ್ಯೆ ಕುರಿತು ಮಾಹಿತಿ ನೀಡಿದ ಎನ್‌ಐಎ ಮುಖ್ಯಸ್ಥ

By

Published : Jul 4, 2022, 9:41 PM IST

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮುಖ್ಯಸ್ಥ ದಿನಕರ್ ಗುಪ್ತಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ, ಉದಯಪುರದಲ್ಲಿ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ತನಿಖೆಯ ಸ್ಥಿತಿಗತಿಯ ಬಗ್ಗೆ ವಿವರಿಸಿದ್ದಾರೆ.

ತನಿಖೆಯ ಬಗ್ಗೆ ಹೆಚ್ಚಿನದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಗುಪ್ತಾ ಈಟಿವಿ ಭಾರತದ ಜೊತೆ ತಿಳಿಸಿದ್ದಾರೆ. ಪ್ರಕರಣವು ತನಿಖೆ ಹಂತದಲ್ಲಿದ್ದು, ಸದ್ಯಕ್ಕೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನು ಎನ್‌ಐಎ ಮುಖ್ಯಸ್ಥರು ಅಮಿತ್ ಶಾ ಅವರಿಗೆ ತನಿಖೆಯ ಪ್ರಸ್ತುತ ಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಗುಪ್ತಾ ಅವರು ಶಾ ಅವರೊಂದಿಗಿನ ಭೇಟಿಯ ವೇಳೆ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದಲ್ಲಿ ಪಾಕಿಸ್ತಾನದ ಸಂಪರ್ಕದ ಬಗ್ಗೆಯೂ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಉದಯಪುರ ಹತ್ಯೆಯು ಮೊಟ್ಟ ಮೊದಲ ಈ ರೀತಿಯ ಪ್ರಕರಣವಾಗಿದೆ.

ಇದಕ್ಕೂ ಮುನ್ನ, ಎನ್‌ಐಎಯ ಹಿರಿಯ ಅಧಿಕಾರಿಯೊಬ್ಬರು ಈಟಿವಿ ಭಾರತಕ್ಕೆ ಹೇಳಿಕೆ ನೀಡಿದ್ದು, ಉದಯಪುರ ಹತ್ಯೆಯು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿರುವ ಸ್ಥಳೀಯ ಗ್ಯಾಂಗ್‌ಗಳ ಕೈವಾಡ ಇರಬಹುದು ಎಂದು ಹೇಳಿದ್ದಾರೆ.

ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಘೌಸ್ ಮೊಹಮ್ಮದ್ 2014 ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ, ಆತ ಕರಾಚಿ ಇಸ್ಲಾಮಿಕ್ ಸಂಘಟನೆಯಾದ ದಾವತ್-ಎ-ಇಸ್ಲಾಮಿಯೊಂದಿಗೆ ಸಂಪರ್ಕ ಹೊಂದಿದ್ದ ಎಂದು ವರದಿಯಾಗಿದೆ.

ಇದನ್ನೂ ಓದಿ: ಗೆಳತಿಯೊಂದಿಗೆ ಲಾಡ್ಜ್‌ಗೆ ಹೋಗಿದ್ದ ಯುವಕ ಇದ್ದಕ್ಕಿದ್ದಂತೆ ಸಾವು: ಶಕ್ತಿ ಹೆಚ್ಚಿಸುವ ಮಾತ್ರೆ ಸೇವಿಸಿರುವ ಶಂಕೆ

For All Latest Updates

ABOUT THE AUTHOR

...view details