ಜಮ್ಮು (ಜಮ್ಮು ಮತ್ತು ಕಾಶ್ಮೀರ):ಜಮ್ಮು ಮತ್ತು ಕಾಶ್ಮೀರದ ಬತಿಂಡಿ ಪ್ರದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪೊಲೀಸರು, ನಿಷೇಧಿತ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ಒಜಿಡಬ್ಲ್ಯೂಎಸ್ (ಓವರ್ ಗ್ರೌಂಡ್ ವರ್ಕರ್ಸ್) ಅನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಾರ್ಟ್ರಿಜ್ಗಳು ಹಾಗೂ ಗ್ರೆನೇಡ್ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಕುರಿತಂತೆ ಎಫ್‌ಐಆರ್ ದಾಖಲಾಗಿದೆ. ಜೊತೆಗೆ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಸೋಪೋರ್ ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾದ ಇಬ್ಬರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸೇನೆ ಮತ್ತು ಸೊಪೋರ್ ಪೊಲೀಸರು ಜಂಟಿ ದಾಳಿಯ ಸಮಯದಲ್ಲಿ ಟಾರ್ಜೊ ಸೊಪೋರ್‌ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಇಬ್ಬರು ಉಗ್ರಗಾಮಿ ಸಹಾಯಕರು ನಿಗ್ಲಿಸೋಪುರದಿಂದ ಲಯನ್ ಕಾಲೋನಿ ಕಡೆಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಂಚಾರ ಮಾಡುತ್ತಿದ್ದರು. ಆದರೆ, ಪೊಲೀಸರು ಅವರನ್ನು ನಿಲ್ಲಿಸಲು ಹೇಳಿದರು. ಆದರೆ, ಆರೋಪಿಗಳು ನಿಲ್ಲದೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದರು. ಸೋಪೋರ್‌ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರಿಂದ ಕೆಲವು ಶಸ್ತ್ರಾಸ್ತ್ರಗಳು ವಶಕ್ಕೆ:ಪ್ರಾಥಮಿಕ ತನಿಖೆಯಲ್ಲಿ ಅವರನ್ನು ಮಂಜೂರ್ ಅಹ್ಮದ್ ಬಟ್ ಮತ್ತು ತನ್ವೀರ್ ಅಹ್ಮದ್ ಲೋನ್ ಎಂದು ಪೊಲೀಸರು ಗುರುತಿಸಿದ್ದಾರೆ. ಇವರಿಬ್ಬರೂ ತರ್ಜೊ ದರ್ನಾಂಬಲ್ ನಿವಾಸಿಗಳು. ಬಂಧಿತರಿಂದ ಕೆಲವು ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಉಗ್ರರು ಲಷ್ಕರ್ - ಎ - ತೊಯ್ಬಾ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.