ಶ್ರೀನಗರ (ಜಮ್ಮು ಮತ್ತು ಕಾಶ್ಮೀರ):ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದಲ್ಲದೇ, ಉಗ್ರ ಕೃತ್ಯಕ್ಕೆ ನಿಧಿ ಸಂಗ್ರಹಣ ಮಾಡುತ್ತಿದೆ ಎಂಬ ಆರೋಪದ ಮೇಲೆ ಜಮ್ಮು ಕಾಶ್ಮೀರದ ಅಲ್ ಹುದಾ ಎಜುಕೇಷನಲ್ ಟ್ರಸ್ಟ್ಗೆ ಸೇರಿದ ಹಲವು ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ದಾಳಿ ಮಾಡಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಪೂಂಚ್, ಜಮ್ಮು, ಶ್ರೀನಗರ, ಪುಲ್ವಾಮಾ, ಬುದ್ಗಾಮ್, ಶೋಪಿಯಾನ್ ಮತ್ತು ಬಂಡಿಪೋರಾ ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿರುವ ಟ್ರಸ್ಟ್ನ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿರುವ ಅಲ್ ಹುದಾ ಎಜುಕೇಷನಲ್ ಟ್ರಸ್ಟ್ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿದ್ದು, ಅದರ ಅನುಮಾನಾಸ್ಪದ ಚಟುವಟಿಕೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.