ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಐಇಡಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈ ಕುರಿತು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಇಸ್ರೇಲ್ ರಾಯಭಾರಿ ಕಚೇರಿ ಸ್ಫೋಟ ಪ್ರಕರಣವನ್ನು ಎನ್ಐಎ ವಹಿಸುವ ಸಾಧ್ಯತೆ - ಇಸ್ರೇಲ್ ರಾಯಭಾರಿ ಕಚೇರಿ ಸ್ಫೋಟ ಪ್ರಕರಣವನ್ನು ಎನ್ಐಎ ವಹಿಸುವ ಸಾಧ್ಯತೆ
ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದರಿಂದಾಗಿ ಘಟನೆಯಲ್ಲಿ ಯಾವುದೇ ಸಾವು-ನೋವುಗಳಾಗಿಲ್ಲ. ಅತೀ ಹೆಚ್ಚು ಭದ್ರತೆ ಹೊಂದಿರುವ ಪ್ರದೇಶದಲ್ಲಿಯೇ ಸ್ಫೋಟ ಸಂಭವಿಸಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ..
ಎನ್ಐಎ ಅಧಿಕಾರಿಗಳ ತಂಡ ನಿನ್ನೆ ಸಂಜೆ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿದ್ದ ಕೆಲ ವಸ್ತುಗಳನ್ನು ಸಂಗ್ರಹಿಸಿತ್ತು. ಜೊತೆಗೆ ಸಿಸಿ ಟಿವಿ ದೃಶ್ಯ ಪರಿಶೀಲನೆ ನಡೆಸಲಾಗಿದ್ದು, ದೆಹಲಿ ಪೊಲೀಸ್ ಅಧಿಕಾರಿಗಳು ಮತ್ತು ಬಾಂಬ್ ಸ್ಕ್ವಾಡ್ ತಂಡದಿಂದ ಮಾಹಿತಿ ಪಡೆದಿದೆ.
ಇನ್ನು, ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಜೆನ್ಸಿ ಶೀಘ್ರದಲ್ಲೇ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ನಿನ್ನೆ ಸಂಜೆ ಐಇಡಿ ಸ್ಫೋಟ ಸಂಭವಿಸಿತ್ತು. ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದರಿಂದಾಗಿ ಘಟನೆಯಲ್ಲಿ ಯಾವುದೇ ಸಾವು-ನೋವುಗಳಾಗಿಲ್ಲ. ಅತೀ ಹೆಚ್ಚು ಭದ್ರತೆ ಹೊಂದಿರುವ ಪ್ರದೇಶದಲ್ಲಿಯೇ ಸ್ಫೋಟ ಸಂಭವಿಸಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.