ಮಧ್ಯಪ್ರದೇಶ: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೋಪಾಲ್ ಮತ್ತು ಇಂದೋರ್ನಲ್ಲಿ ನಿನ್ನೆಯಿಂದಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಸೆಕ್ಷನ್ 144 ಸಹ ಘೋಷಿಸಲಾಗಿದೆ.
ಕೊರೊನಾ ಕರಿಛಾಯೆ: ಇಂದೋರ್, ಭೋಪಾಲ್‌ನಲ್ಲಿ ನೈಟ್ ಕರ್ಫ್ಯೂ - ಕೋವಿಡ್-19 ಹೊಸ ಪ್ರಕರಣಗಳು
ಕೋವಿಡ್-19 ಹೊಸ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶ ಸರ್ಕಾರವು ಇಂದೋರ್ ಮತ್ತು ಭೋಪಾಲ್‌ನಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ.
ಕೋವಿಡ್-19 ಹೊಸ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶ ಸರ್ಕಾರವು ಬುಧವಾರ ಇಂದೋರ್ ಮತ್ತು ಭೋಪಾಲ್‌ನಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿದೆ. ಈ ಸಮಯದೊಳಗೆ ಮಾರುಕಟ್ಟೆ, ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ತಿಳಿಸಿದೆ.
ಇನ್ನು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದ್ದು, ಅನಾವಶ್ಯಕವಾಗಿ ಹೊರಗಡೆ ಸುತ್ತಾಡದಂತೆ ಸೂಚನೆ ನೀಡಲಾಗಿದೆ. ಜೊತೆಗೆ ಸೆಕ್ಷನ್ 144 ಅನ್ನು ಸಹ ಜಾರಿ ಮಾಡಲಾಗಿದ್ದು, ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.