ಅಹಮದಾಬಾದ್: ಕೋವಿಡ್ -19 ಪ್ರಕರಣಗಳು ಹೆಚ್ಚಾದ ಕಾರಣ ಅಹಮದಾಬಾದ್‌ನಲ್ಲಿ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6ರವರೆಗೆ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ. ಈ ಅವಧಿಯಲ್ಲಿ ಹಾಲು ಮತ್ತು ಔಷಧಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಮಾತ್ರ ತೆರೆಯಲು ಅನುಮತಿ ನೀಡಲಾಗುವುದು ಎಂದು ಗುಜರಾತ್ ಸರ್ಕಾರದ ಎಸಿಎಸ್ ಪರಿಸರ ಮತ್ತು ಅರಣ್ಯ ರಾಜೀವ್ ಗುಪ್ತಾ ಹೇಳಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ಇಂದಿನಿಂದ ಅಹಮದಾಬಾದ್‌ನಲ್ಲಿ ರಾತ್ರಿ ಕರ್ಫ್ಯೂ ಜಾರಿ - ಅಹಮದಾಬಾದ್‌ನಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು
ಗುಜರಾತ್‌ನ ಅಹಮದಾಬಾದ್‌ನಲ್ಲಿ ಕೊರೊನಾ ಪ್ರಕರಣಗಳು ದಿನೆ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ರವರೆಗೆ ಸಂಪೂರ್ಣ ಕರ್ಫ್ಯೂ ವಿಧಿಸಲಾಗಿದೆ.
ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯಿಂದಾಗಿ ನವೆಂಬರ್ 23ರಿಂದ ಗುಜರಾತ್‌ನ ಶಾಲೆ - ಕಾಲೇಜುಗಳು ತೆರೆಯುವುದಿಲ್ಲ. ಕೊರೊನಾ ವೈರಸ್ ಹರಡುವಿಕೆ ನಿಯಂತ್ರಿಸಲು ಶುಕ್ರವಾರದಿಂದ ಅಹಮದಾಬಾದ್‌ನಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ನಿರ್ಧರಿಸಲಾಗಿತ್ತು.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಗುಪ್ತಾ ಅವರು ಈ ಕುರಿತು ಪ್ರಕಟಣೆ ನೀಡಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾವೈರಸ್ ರೋಗಿಗಳ ಹಾಸಿಗೆಗಳು ವೇಗವಾಗಿ ಭರ್ತಿಯಾಗುತ್ತಿವೆ. ಕಳೆದ ಕೆಲವು ದಿನಗಳಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಹೆಚ್ಚಳ ಕಂಡಿದೆ. ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 2,600 ಹಾಸಿಗೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.
TAGGED:
Ahmedabad Curfew news