ಹೈದರಾಬಾದ್:ಲಾಕ್ಡೌನ್ ಅಥವಾ ಕರ್ಫ್ಯೂ ಜಾರಿ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಗಡುವು ನೀಡಿದ ಬೆನ್ನಲ್ಲೇ ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ವಿಧಿಸಿ ಆದೇಶ ಹೊರಡಿಸಿದೆ.
ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ. ರಾತ್ರಿ 8 ಗಂಟೆಯ ಒಳಗಾಗಿ ಕಚೇರಿ, ಅಂಗಡಿ, ಹೋಟೆಲ್ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಆಸ್ಪತ್ರೆ, ಮೆಡಿಕಲ್ಗಳಂತಹ ತುರ್ತು ಸೇವೆಗಳಿಗೆ ಯಾವುದೇ ಅಡ್ಡಿಯಿರುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.