ಬಿಹಾರ:ಎರಡನೇ ಬಾರಿಗೆ ಆರ್‌ಜೆಡಿ, ಕಾಂಗ್ರೆಸ್ ಪಕ್ಷಗಳ ಮಹಾಘಟಬಂಧನ್ನಲ್ಲಿ ಗುರುತಿಸಿಕೊಂಡಿರುವ ಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ನಿತೀಶ್ ಕುಮಾರ್ 8 ನೇ ಬಾರಿಗೆ ಬಿಹಾರ ಸಿಎಂ ಆಗಿ ಪದಗ್ರಹಣ ಮಾಡಿದರು. ಇನ್ನು ಬಿಹಾರದ ಉಪ ಮುಖ್ಯಮಂತ್ರಿಯಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸಹ ಪ್ರಮಾಣವಚನ ಸ್ವೀಕರಿಸಿದರು.
ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
ನಿರೀಕ್ಷೆಯಂತೆ ನಿತೀಶ್ ಕುಮಾರ್ ಮತ್ತೆ ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
Nitish Kumar took oath
ಪಾಟ್ನಾದ ರಾಜಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ನಿಯೋಜಿತ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಮತ್ತು ಅವರ ಪತ್ನಿ ರಾಜಶ್ರೀ, ಮಾಜಿ ಸಿಎಂ ರಾಬ್ರಿ ದೇವಿ ಮತ್ತು ಆರ್‌ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಪಾಲ್ಗೊಂಡಿದ್ದರು.
ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡು ನಿತೀಶ್ ಕುಮಾರ್ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇಂದು ಮಹಾಘಟಬಂಧನ್ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದರು.
Last Updated : Aug 10, 2022, 3:01 PM IST