ಪಂಚರಾಜ್ಯ ಚುನಾವಣೆ ಫಲಿತಾಂಶ ಬಹಿರಂಗಗೊಂಡ ಬೆನ್ನಲ್ಲೇ ಪ್ರತಿದಿನ ತೈಲ ಬೆಲೆಯಲ್ಲಿ ಹೆಚ್ಚಳವಾಗುತ್ತಿದೆ. ಆದರೆ, ಇಂದು ಬೆಲೆ ಏರಿಕೆಗೆ ಬ್ರೇಕ್ ಬಿದ್ದಿದೆ. ಹೀಗಾಗಿ, ವಾಹನ ಸವಾರರು ಸ್ವಲ್ಪ ನಿರಾಳರಾಗಿದ್ದಾರೆ. ಪ್ರಮುಖವಾಗಿ ದೆಹಲಿ, ಚೆನ್ನೈ, ಮುಂಬೈ, ಕೋಲ್ಕತ್ತಾ ಸೇರಿದಂತೆ ಪ್ರಮುಖ ನಗರಗಳಲ್ಲಿ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(ಐಒಸಿಎಲ್) ಬಿಡುಗಡೆ ಮಾಡಿರುವ ದರಪಟ್ಟಿಯ ಪ್ರಕಾರ, ಬೆಂಗಳೂರಿನಲ್ಲಿಂದು ಪೆಟ್ರೋಲ್ ದರ ಲೀ. 100.56 ಪೈಸೆ, ಡೀಸೆಲ್ ಬೆಲೆ ಲೀ.ಗೆ 90.49 ಇದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ 101.81 ಪೈಸೆ ಹಾಗೂ ಡೀಸೆಲ್ಗೆ 93.07 ರೂ. ಇತ್ತು. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 116.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 100.94 ರೂ. ಇದಲ್ಲದೇ, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ 107.45 ರೂ.ಗೆ ಮತ್ತು ಡೀಸೆಲ್ ಲೀಟರ್‌ಗೆ 97.52 ರೂ.ಗೆ ಲಭ್ಯವಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 111.35 ರೂ ಮತ್ತು ಡೀಸೆಲ್ ರೂ 96.22 ಕ್ಕೆ ಮಾರಾಟವಾಗುತ್ತಿದೆ.