ನವದೆಹಲಿ: ಮುಂಬೈ ಪೊಲೀಸರು ಟಿಆರ್‌ಪಿ ಹಗರಣದ ಕುರಿತು ತನಿಖೆ ನಡೆಸುತ್ತಿದ್ದ ವೇಳೆ ಕಲಂ 370 ರದ್ದು ಸೇರಿದಂತೆ ಸೂಕ್ಷ್ಮ ಮಾಹಿತಿಯ ಬಗ್ಗೆ ವಾಟ್ಸ್ಆ್ಯಪ್ ಚಾಟ್ ಸೋರಿಕೆಯಾಗಿದೆ ಎಂದು ಸರ್ಕಾರದ ಗಮನಕ್ಕೆ ಬಂದಿಲ್ಲ ಅಂತಾ ಗೃಹ ಸಚಿವಾಲಯ ಲೋಕಸಭೆಗೆ ತಿಳಿಸಿದೆ.
'370ನೇ ಕಲಂ ರದ್ದು ಕುರಿತಾದ ವಾಟ್ಸ್ಆ್ಯಪ್ ಚಾಟ್ ಸೋರಿಕೆ ವಿಚಾರ ಸರ್ಕಾರದ ಗಮನಕ್ಕೆ ಬಂದಿಲ್ಲ' - 370ನೇ ಕಲಂ ರದ್ದು ಕುರಿತಾದ ವಾಟ್ಸಾಪ್ ಚಾಟ್ ಸೋರಿಕೆ ವಿಚಾರ ಸರ್ಕಾರದ ಗಮನಕ್ಕೆ ಬಂದಿಲ್ಲ
ಕಲಂ 370 ರದ್ದು ಸೇರಿದಂತೆ ಸೂಕ್ಷ್ಮ ಮಾಹಿತಿಯ ಬಗ್ಗೆ ವಾಟ್ಸ್ಆ್ಯಪ್ ಚಾಟ್ ಸೋರಿಕೆಯಾಗಿದೆ ಎಂದು ಸರ್ಕಾರದ ಗಮನಕ್ಕೆ ಬಂದಿಲ್ಲ ಅಂತಾ ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
WhatsApp chat
ಟಿಆರ್‌ಪಿ ಪ್ರಕರಣದಲ್ಲಿ ಮುಂಬೈ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ ನಂತರ ಈ ವರ್ಷದ ಆರಂಭದಲ್ಲಿ ವಾಟ್ಸ್ಆ್ಯಪ್ ಸಂಭಾಷಣೆ ಸೋರಿಕೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಹಾಗಾಗಿ ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಂಡಿಯೇ ಎಂದು ಪ್ರಶ್ನಿಸಲಾಗಿತ್ತು.
ಈ ಕುರಿತು ಮಾಹಿತಿ ನೀಡಿರುವ ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ, ಅಂತಹ ಯಾವುದೇ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿಲ್ಲ ಎಂದು ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ.