ಹೈದರಾಬಾದ್, ತೆಲಂಗಾಣ:ಯಾವುದೇ ಪರಿಸ್ಥಿತಿ ಎದುರಾದರೂ ತೆಲಂಗಾಣ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವುದಿಲ್ಲ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ಕೊರೊನಾ ನಿಯಂತ್ರಣದಲ್ಲಿ ಪ್ರಥಮ ಸ್ಥಾನದಲ್ಲಿದೆ. ಕೊರೊನಾ ನಿಯಂತ್ರಣಕ್ಕೆ ಶಾಲೆಗಳನ್ನು ಮುಚ್ಚಲಾಗಿದೆ. ಇನ್ನೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆಯೇ ಹೊರತು, ಲಾಕ್ಡೌನ್ ಯಾವುದೇ ಕಾರಣಕ್ಕೂ ಜಾರಿ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.