ಹೈದರಾಬಾದ್ :ಕೊರೊನಾ ಸೋಂಕಿನ ಆತಂಕ ಬಹುತೇಕ ಎಲ್ಲಾ ರಾಜ್ಯಗಳಲ್ಲಿ ಮತ್ತೆ ಆರಂಭವಾಗಿದೆ. ಈ ಹಿನ್ನೆಲೆ ತೆಲಂಗಾಣ ಸರ್ಕಾರ ಇಂದಿನಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಚಿತ್ರಮಂದಿರಗಳನ್ನು ಮುಚ್ಚುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದೆ.
ಸಿನಿಮಾಟೋಗ್ರಫಿ ಖಾತೆ ಸಚಿವರಾದ ಟಿ.ಶ್ರೀನಿವಾಸ್ ಯಾದವ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೊನಾ ಹಿನ್ನೆಲೆ ಚಿತ್ರಮಂದಿರಗಳನ್ನು ಮುಚ್ಚಲಾಗುತ್ತದೆ ಎಂದು ಕೆಲ ಗಾಳಿ ಸುದ್ದಿ ಹರಿದಾಡುತ್ತಿದೆ. ಈ ಸುದ್ದಿಯಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದಿದ್ದಾರೆ.
ಸರ್ಕಾರ ಈವರೆಗೆ ಚಿತ್ರಮಂದಿರಗಳನ್ನು ಮುಚ್ಚುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೋವಿಡ್ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಚಿತ್ರಮಂದಿರಗಳಲ್ಲಿ ಚಲನಚಿತ್ರಗಳನ್ನು ಪ್ರದರ್ಶನ ಮಾಡಬಹುದಾಗಿದೆ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.