ನವದೆಹಲಿ:''ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗೂಡಬೇಕು'' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬಿಜೆಪಿ ನಾಯಕರಿಗೆ ಸಂದೇಶ ನೀಡಿದ್ದಾರೆ.
ಮೂಲಗಳ ಪ್ರಕಾರ, ಶುಕ್ರವಾರ ಇಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ರಾಜಸ್ಥಾನ ಬಿಜೆಪಿಯ ಹಿರಿಯ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ರಾಜ್ಯ ಘಟಕದಲ್ಲಿನ ಗುಂಪುಗಾರಿಕೆಯನ್ನು ಅರಿತುಕೊಂಡರು ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ನಾಯಕರಿಗೆ ತಿಳಿಸಿದ್ದಾರೆ.
ಸಭೆಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸೇರಿದಂತೆ ರಾಜಸ್ಥಾನ ಬಿಜೆಪಿಯ ಹಲವಾರು ಹಿರಿಯ ನಾಯಕರು ಉಪಸ್ಥಿತರಿದ್ದರು. ವಸುಂಧರಾ ರಾಜೇ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಉಳಿದಿರುವ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಿ ಅಂತಿಮಗೊಳಿಸಲು ಸಭೆ ಕರೆಯಲಾಗಿದೆ.
ಮಧ್ಯಪ್ರದೇಶದ 92 ಹೆಸರುಗಳು ಅಂತಿಮ:ಶುಕ್ರವಾರ ನಡೆದ ಸಭೆಯಲ್ಲಿ ಮಧ್ಯಪ್ರದೇಶದ 94 ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪಕ್ಷದ ಸಿಇಸಿ ಸಭೆಯಲ್ಲಿ ಚರ್ಚಿ ಮಾಡಲಾಗಿದೆ. ಆದರೆ, ಸಭೆಯಲ್ಲಿ 92 ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಈ ಎರಡು ರಾಜ್ಯಗಳ ಅಭ್ಯರ್ಥಿಗಳ ಮುಂದಿನ ಪಟ್ಟಿ ಶನಿವಾರ ಅಥವಾ ಭಾನುವಾರ ಬಿಡುಗಡೆಯಾಗಬಹುದು ಎಂದು ಮೂಲಗಳು ತಿಳಿಸಿವೆ.