ಮುಂಬೈ :ಕಳೆದ ಎಂಟು ದಿನಗಳಿಂದ ಕರ್ನಾಟಕದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ಪ್ರಶ್ನಿಸುವವರು ಯಾರೂ ಇಲ್ಲ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ತಮ್ಮ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಗಳ ಬಗ್ಗೆ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸುತ್ತಿದೆ. ಆದರೆ, ಬೆಳಗಾವಿಯಲ್ಲಿ ಮರಾಠಿಗರ ಮೇಲಾಗುತ್ತಿರುವ ಹಲ್ಲೆ ಬಗ್ಗೆ ಕೇಳೋರ‍್ಯಾರೂ ಇಲ್ಲ.
ನಮ್ಮ ಜನರನ್ನು ಬೆಂಬಲಿಸಲು ಸರ್ವಪಕ್ಷಗಳ ನಿಯೋಗದೊಂದಿಗೆ ಬೆಳಗಾವಿಗೆ ಹೋಗಬೇಕೆಂದು ನಾನು ಮಹಾರಾಷ್ಟ್ರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ಬಳಿ ಮನವಿ ಮಾಡುತ್ತೇನೆ ಎಂದು ರಾವತ್ ತಿಳಿಸಿದರು.