ನವದೆಹಲಿ :2022ರ ನಾಗರಿಕ ಸೇವಾ ಪರೀಕ್ಷೆಯ ಆಕಾಂಕ್ಷಿಗಳಿಗೆ ಹೆಚ್ಚುವರಿ ಅವಕಾಶಗಳನ್ನು ನೀಡುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.
ಕೋವಿಡ್-19 ಸಾಂಕ್ರಾಮಿಕದಿಂದಾಗಿ ಪರೀಕ್ಷೆ ಬರೆಯಲು ಸಾಧ್ಯವಾಗದ ಅಭ್ಯರ್ಥಿಗಳು ಹಾಗೂ ವಯೋಮಿತಿ ಸಡಿಲಿಕೆ ಬಯಸಿರುವ ಅಭ್ಯರ್ಥಿಗಳು ತಮಗೆ ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ ನೀಡಿ ಸುಪ್ರೀಂಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ಕೋರ್ಟ್ ನಾಗರಿಕರ ಮೂಲಭೂತ ಹಕ್ಕು ರಕ್ಷಿಸುತ್ತದೆ, ಸೂಕ್ತ ಸಮಯದಲ್ಲಿ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್ ನೀಡಿದ ತೀರ್ಪಿನಂತೆ ನಾಗರಿಕ ಸೇವಾ ಪರೀಕ್ಷೆ ಬರೆಯುವ ಪ್ರಯತ್ನಗಳ ಸಂಖ್ಯೆ ಮತ್ತು ವಯಸ್ಸಿನ ಮಿತಿಗೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ನಿಬಂಧನೆಗಳನ್ನು ಬದಲಾಯಿಸುವುದು ಕಾರ್ಯಸಾಧ್ಯವೆಂದು ಕಂಡು ಬಂದಿಲ್ಲ. ಹೀಗಾಗಿ, ಅಂತಹ ಅವಕಾಶ ನೀಡುವ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ರಾಜ್ಯಸಭೆಯಲ್ಲಿ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.