ನವದೆಹಲಿ: ಮಹಾರಾಷ್ಟ್ರ ರಾಜ್ಯ ಗೃಹ ಸಚಿವ ಅನಿಲ್ ದೇಶಮುಖ್ ಅವರ ರಾಜೀನಾಮೆ ಸಾಧ್ಯತೆಯ ಬಗ್ಗೆ ಪಕ್ಷವು ತನ್ನ ನಿಲುವು ಬದಲಿಸಿದೆ. ದೇಶಮುಖ್ ರಾಜೀನಾಮೆ ಕುರಿತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸುಳಿವು ನೀಡಿದ ಗಂಟೆಯೊಳಗೆ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಪಕ್ಷವು ತಿಳಿಸಿದೆ.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಪವಾರ್, ದೇಶಮುಖ್ ವಿರುದ್ಧದ ಆರೋಪ ಗಂಭೀರವಾದುದು. ವಿಷಯದ ಆಳಕ್ಕಿಳಿದು ತನಿಖೆ ಮಾಡುವುದು ಅಗತ್ಯ. ದೇಶಮುಖ್ ರಾಜೀನಾಮೆ ಬಗ್ಗೆ ಸೋಮವಾರ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.