ತಿರುವನಂತಪುರಂ (ಕೇರಳ): ಭಾರತ ಸರ್ಕಾರವು ಶ್ರೀಲಂಕಾಕ್ಕೆ ಯಾವಾಗಲೂ ಬೆಂಬಲ ನೀಡುತ್ತಿದೆ. ಪ್ರಸ್ತುತ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ನೆರೆಯ ದೇಶಕ್ಕೆ ಸಹಾಯ ಮಾಡಲು ಪ್ರಯತ್ನಿಸುತ್ತಿದೆ. ಸದ್ಯಕ್ಕೆ ನಿರಾಶ್ರಿತರ ಬಿಕ್ಕಟ್ಟು ಇಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಮೂರು ದಿನಗಳ ಭೇಟಿಗಾಗಿ ರಾಜ್ಯ ರಾಜಧಾನಿಗೆ ಆಗಮಿಸಿದ ನಂತರ ತಿರುವನಂತಪುರಂ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಯಾವಾಗಲೂ ಶ್ರೀಲಂಕಾಕ್ಕೆ ಬೆಂಬಲ ಮತ್ತು ಸಹಾಯ ಮಾಡುತ್ತದೆ. ಆ ದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದಿದ್ದಾರೆ.