ಕುಪ್ವಾರ, ಜಮ್ಮು-ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದಿಂದ ಬ್ರೇಕಿಂಗ್ ಸುದ್ದಿಯೊಂದು ಬಂದಿದೆ. ಭಾರತ ಪಾಕ್ ಗಡಿ ನಿಯಂತ್ರಣ ರೇಖೆಯ ಪಕ್ಕದಲ್ಲಿರುವ ಕುಪ್ವಾರ ಜಿಲ್ಲೆಯ ಬಳಿ ಭದ್ರತಾ ಪಡೆ ಮತ್ತು ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 5 ಉಗ್ರರು (Terrorists Killed in Encounter) ಹತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಈ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಏಜೆನ್ಸಿಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ 5 ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂಬುದು ತಿಳಿದು ಬಂದಿದೆ.
ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಗಳ ಜಂಟಿ ತಂಡವು ತಡರಾತ್ರಿ ಗಡಿ ನಿಯಂತ್ರಣ ರೇಖೆಯ ಪ್ರದೇಶವಾದ ಜಾಮಗುಂಡ್‌ನಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಾಗ ಈ ಗುಂಡಿನ ದಾಳಿ ನಡೆದಿದೆ ಎಂದು ಸೇನೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಮೃತ ಉಗ್ರರು ವಿದೇಶಿಗರು. ಈ ಪ್ರದೇಶದಲ್ಲಿ ಉಗ್ರರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿತ್ತು. ಬಳಿಕ ಸೇನೆ ಶೋಧ ಕಾರ್ಯಾಚರಣೆಯನ್ನು ಸಹ ಪ್ರಾರಂಭಿಸಿತ್ತು. ಆಗ ಉಗ್ರರು ಸೇನೆಯನ್ನು ಕಂಡು ಗುಂಡಿನ ದಾಳಿ ನಡೆಸಿದರು. ಆ ಕಡೆಯಿಂದಲೂ ಗುಂಡಿನ ದಾಳಿ ಪ್ರಾರಂಭವಾಯಿತು. ಗುಂಡಿನ ದಾಳಿಯಲ್ಲಿ ಐವರು ವಿದೇಶಿ ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಈ ಘರ್ಷಣೆಯಿಂದಾಗಿ ಸ್ಥಳೀಯ ಜನರು ಭಯಭೀತಗೊಂಡಿದ್ದಾರೆ. ಅಷ್ಟೇ ಅಲ್ಲ ಜನರು ಭಯದಿಂದ ಮನೆಗಳಿಗೆ ಬೀಗ ಹಾಕಿಕೊಂಡಿದ್ದಾರೆ. ಈ ಘಟನೆಯ ನಂತರ ಈ ಪ್ರದೇಶದಲ್ಲಿ ವಾಹನ ಸಂಚಾರಕ್ಕೂ ತೊಂದರೆಯಾಗಿದೆ.