ಚಂಡೀಗಢ:ಪಂಜಾಬ್ ವಿಧಾನಸಭೆ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾ ಮತ್ತು ಡೆಪ್ಯೂಟಿ ಸ್ಪೀಕರ್ ಜೈಕಿಶನ್ ರೋಡಿ ಹಾಗೂ ಕ್ಯಾಬಿನೆಟ್ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ಮತ್ತು ಮೀಟ್ ಹೇಯರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ. ಪಂಜಾಬ್ ತರ್ನ್ ತರಣ್ ಜಿಲ್ಲಾ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ವಿರುದ್ಧ ಜಾಮೀನು ರಹಿತ ವಾರಂಟ್... ಕಾರಣ ಏನು ಗೊತ್ತಾ?
2020ರ ಆಗಸ್ಟ್‌ನಲ್ಲಿ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಅಲ್ಲಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಇವರೆಲ್ಲ ಕೋರ್ಟ್ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು
2020ರ ಆಗಸ್ಟ್‌ನಲ್ಲಿ ಅಮೃತಸರ ಮತ್ತು ತರ್ನ್ ತರಣ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದ ಸಾವುಗಳ ವಿರುದ್ಧ ಧರಣಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಅಲ್ಲಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಇವರೆಲ್ಲ ಕೋರ್ಟ್ಗೆ ಹಾಜರಾಗದೇ ತಪ್ಪಿಸಿಕೊಂಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾ ನ್ಯಾಯಾಲಯ ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಹಾಗೂ ಇಬ್ಬರು ಸಚಿವರು ಮತ್ತು ಶಾಸಕರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಇದನ್ನು ಓದಿ:ಮನೆ ಮುಂದೆ ಬೈಕ್ ನಿಲ್ಲಿಸಿ ಮಾತನಾಡಿದ್ದೇ ತಪ್ಪಾಯ್ತು.. ಯುವಕನ ಮೇಲೆ ಗುಂಡಿನ ದಾಳಿ