ಕರ್ನಾಟಕ

karnataka

ETV Bharat / bharat

ಪುಲ್ವಾಮಾದಲ್ಲಿ ಗುಂಡಿನ ದಾಳಿ: ಹೊರ ರಾಜ್ಯದ ಕಾರ್ಮಿಕನನ್ನು ಹತ್ಯೆ ಮಾಡಿದ ಅಪರಿಚಿತ ಉಗ್ರರು - ಕಾರ್ಮಿಕನನ್ನು ಹತ್ಯೆಗೈದ ಅಪರಿಚಿತ ಉಗ್ರರು

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೌಪೋರಾದಲ್ಲಿ ಕಾಶ್ಮೀರೇತರ ಕಾರ್ಮಿಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Non-local labourer shot dead in Pulwama
Non-local labourer shot dead in Pulwama

By ETV Bharat Karnataka Team

Published : Oct 30, 2023, 1:57 PM IST

Updated : Oct 30, 2023, 3:31 PM IST

ದಕ್ಷಿಣ ಕಾಶ್ಮೀರ:ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೌಪೋರಾದಲ್ಲಿ ಉಗ್ರಗಾಮಿಗಳು, ಕಾಶ್ಮೀರಿ ಅಲ್ಲದ ಹೊರ ರಾಜ್ಯದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಉತ್ತರ ಪ್ರದೇಶ ಮೂಲದ ಮುಖೇಶ್ ಹತ್ಯೆಗೀಡಾದ ಕಾರ್ಮಿಕ. ಪುಲ್ವಾಮಾದ ತುಮ್ಚಿ ಬಳಿ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದ್ದು, ಈ ಗುಂಡಿನ ದಾಳಿಯಲ್ಲಿ ಮುಖೇಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ.

ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಮಾಧ್ಯಮ ವೇದಿಕೆ x ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ''ಸೋಮವಾರ ಮಧ್ಯಾಹ್ನ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನೌಪೋರಾ ಪ್ರದೇಶದಲ್ಲಿ ಉತ್ತರ ಪ್ರದೇಶದ ಕಾರ್ಮಿಕ ಮುಕೇಶ್ ಎಂಬಾತನ ಮೇಲೆ ಅಪರಿಚಿತ ಉಗ್ರರು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿ ನಡೆಸಿದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು ಭಯೋತ್ಪಾದಕರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಇನ್ನೊಂದೆಡೆ, ಉತ್ತರ ಕಾಶ್ಮೀರದ ಗಡಿರೇಖೆಯ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್​ಒಸಿ) ಭಾನುವಾರ ಒಳನುಸುಳುತ್ತಿದ್ದ ಮತ್ತೊಬ್ಬ ಉಗ್ರನನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.

ಕುಪ್ವಾರದ ಜುಮಗುಂಡ್​ ಸೆಕ್ಟರ್​ನ ಗಡಿ ರೇಖೆಯಲ್ಲಿ ಭಾರತದ ಕಡೆ ನುಸುಳಲು ಯತ್ನಿಸುತ್ತಿದ್ದ ಅಪರಿಚಿತ ಉಗ್ರನನ್ನು ಸೇನೆ ಹೊಡೆದುರುಳಿಸಿದೆ. ಕಳೆದ ಕೆಲವು ದಿನಗಳಿಂದ ಭಾರತೀಯ ಸೇನೆ ನಿರಂತರವಾಗಿ ಉಗ್ರರ ಜಾಡು ಹಿಡಿದು ಕಾರ್ಯಾಚರಣೆ ಮುಂದುವರೆಸಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯಷ್ಟೇ ಗಡಿ ನಿಯಂತ್ರಣ ರೇಖೆಯ ಮಚಿಲ್​ ಸೆಕ್ಟರ್​ನಲ್ಲಿ ಐವರು ಉಗ್ರರನ್ನು ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸದೆಬಡಿದಿದ್ದರು.

ಭಾರತೀಯ ಸೇನೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಮೇಜರ್​ ಜನರಲ್​ ರಾಜೇಶ್​ ಕಾಲಿಯಾ, ನಮ್ಮ ಪಡೆಗಳ ನಿರಂತರ ಬದ್ಧತೆ ಹಾಗೂ ನಿರ್ಣಯ ಭಯೋತ್ಪಾದನೆ ವಿರೋಧಿ ಹೋರಾಟದಲ್ಲಿ ಗಮನಾರ್ಹ ಯಶಸ್ಸಿಗೆ ಕಾರಣವಾಗಿದೆ. ಕೇವಲ ಎಂಟು ತಿಂಗಳ ಅವಧಿಯಲ್ಲಿ ಕುಪ್ವಾರ ಜಿಲ್ಲೆಯೊಂದರಲ್ಲೇ 27 ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಜಮ್ಮುವಿನ ಅರ್ನಿಯಾ ಮತ್ತು ಆರ್​ಎಸ್ ಪುರ ಸೆಕ್ಟರ್​ಗಳ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿರುವ ಐದು ಬಿಎಸ್​ಎಫ್​ ನೆಲೆಗಳ ಮೇಲೆ ಪಾಕಿಸ್ತಾನದ ರೇಂಜರ್​ಗಳು ಕಳೆದ ಗುರುವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಓರ್ವ ಗಡಿ ಭದ್ರತಾ ಪಡೆಯ ಯೋಧ ಮತ್ತು ನಾಲ್ವರು ನಾಗರಿಕರು ಗಾಯಗೊಂಡಿದ್ದರು. ಈ ಮೂಲಕ ಪಾಕಿಸ್ತಾನ ಅಂತಾರಾಷ್ಟ್ರೀಯ ಒಪ್ಪಂದಗಳ ಉಲ್ಲಂಘಟನೆ ಮಾಡಿತ್ತು. ಇದಕ್ಕೆ ಭಾರತೀಯ ಪಡೆ ತಕ್ಕ ಪ್ರತ್ಯುತ್ತರವನ್ನು ನೀಡಿತ್ತು.

Last Updated : Oct 30, 2023, 3:31 PM IST

ABOUT THE AUTHOR

...view details