ಧರ್ಮಶಾಲಾ (ಹಿಮಾಚಲ ಪ್ರದೇಶ): ಬೌದ್ಧ ಧರ್ಮ ಪ್ರತಿಪಾದಕ, ಟಿಬೆಟಿಯನ್ ಧರ್ಮಗುರು ದಲೈ ಲಾಮಾ ಅವರು ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಪೂರ್ವ ಯುರೋಪಿಯನ್ ದೇಶದಲ್ಲಿ ಶಾಂತಿಯನ್ನು ತ್ವರಿತವಾಗಿ ಪುನಾಃ ಸ್ಥಾಪಿಸಲು ಕರೆ ನೀಡಿದ್ದಾರೆ.
"ನಮ್ಮ ಪ್ರಪಂಚವು ಎಷ್ಟು ಪರಸ್ಪರ ಅವಲಂಬಿತವಾಗಿದೆ ಎಂದರೆ ಎರಡು ದೇಶಗಳ ನಡುವಿನ ಹಿಂಸಾತ್ಮಕ ಸಂಘರ್ಷವು ಪ್ರಪಂಚದ ಇತರ ಭಾಗಗಳ ಮೇಲೆ ಅನಿವಾರ್ಯವಾಗಿ ಪರಿಣಾಮ ಬೀರುತ್ತದೆ. ಯುದ್ಧವು ಹಳೆಯದಾಗಿದೆ- ಅಹಿಂಸೆಯೊಂದೇ ಏಕೈಕ ಮಾರ್ಗವಾಗಿದೆ.
ನಾವು ಇತರ ಮಾನವ ಜೀವಿಗಳನ್ನು ಸಹೋದರರು ಮತ್ತು ಸಹೋದರಿಯ ಎಂದು ಪರಿಗಣಿಸುವ ಮೂಲಕ ಮಾನವೀಯತೆಯ ಏಕತೆಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಶಾಂತಿಯುತ ಜಗತ್ತನ್ನು ನಿರ್ಮಿಸಲು ಸಾಧ್ಯ" ಎಂದು ಹೇಳಿದ್ದಾರೆ.