ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಬಿಜೆಪಿ ನಾಯಕನ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬ್ಯಾಂಕ್ಗೆ ವಂಚನೆ ಪ್ರಕರಣದಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ, ಬಿಜೆಪಿ ನಾಯಕ ಪ್ರವೀಣ್ ದಾರೆಕರ್ ಅವರಿಗೆ ಮುಂಬೈ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಮುಂಬೈ ಜಿಲ್ಲಾ ಸಹಕಾರ ಸಂಘದ ಚುನಾವಣೆಗೆ ಕಾರ್ಮಿಕ ಕೋಟಾದಲ್ಲಿ ಸ್ಪರ್ಧಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪವನ್ನು ಪ್ರವೀಣ್ ದಾರೆಕರ್ ಎದುರಿಸುತ್ತಿದ್ದಾರೆ. ಈ ಸಂಬಂಧ ಆಮ್ ಆದ್ಮಿ ಪಕ್ಷದ ಮುಖಂಡ ಧನಂಜಯ್ ಶಿಂಧೆ ನೀಡಿದ ದೂರಿನ ಮೇರೆಗೆ ಮಾರ್ಚ್ 14ರಂದು ಮುಂಬೈನ ಮಾತಾ ರಮಾಬಾಯಿ ಅಂಬೇಡ್ಕರ್ ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಕೇಸ್ ದಾಖಲಾಗಿದೆ.