ಕರ್ನಾಟಕ

karnataka

ETV Bharat / bharat

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪ್ರಕರಣ: ಯುಪಿ ಸರ್ಕಾರಕ್ಕೆ ನೊಟೀಸ್ - ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಮುಜಾಫರ್‌ನಗರದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಯುಪಿ ಸರ್ಕಾರಕ್ಕೆ ನೊಟೀಸ್ ನೀಡಿದೆ. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ ಓದಿ..

Notice to UP governmen
ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಪ್ರಕರಣ: ಯುಪಿ ಸರ್ಕಾರಕ್ಕೆ ನೊಟೀಸ್

By ETV Bharat Karnataka Team

Published : Aug 30, 2023, 10:31 AM IST

Updated : Aug 30, 2023, 10:45 AM IST

ಮುಜಾಫರ್‌ನಗರ (ಉತ್ತರ ಪ್ರದೇಶ):ಮುಜಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣದಿಂದ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ಪರಿಗಣಿಸಿರುವ ಆಯೋಗವು ಯೋಗಿ ಆದಿತ್ಯನಾಥ ನೇತೃತ್ವದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿಗೆ ನೊಟೀಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಪ್ರಕರಣದ ಸಂಪೂರ್ಣ ವಿವರವಾದ ವರದಿಯನ್ನು ನೀಡುವಂತೆ ಉತ್ತರಪ್ರದೇಶ ಚೀಫ್​ ಸೆಕ್ರೆಟರಿ ಮತ್ತು ಡಿಜಿ- ಐಜಿಗೆ ನೋಟಿಸ್​​ನಲ್ಲಿ ಸೂಚಿಸಿದೆ.

ಖಾಸಗಿ ಶಾಲೆಯೊಂದರ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿಯೊಬ್ಬನಿಗೆ ಅಸಂಬದ್ಧ ರೀತಿಯಲ್ಲಿ ಥಳಿಸುವಂತೆ ಬಾಲಕನ ಸಹಪಾಠಿಗಳಿಗೆ ತಿಳಿಸಿರುವ ಮಾಧ್ಯಮ ವರದಿಗಳನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಶಾಲೆಯು ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬ್ಬಾಪುರ ಗ್ರಾಮದಲ್ಲಿದೆ. ತರಗತಿಯಲ್ಲಿ ವಿದ್ಯಾರ್ಥಿಯೊಬ್ಬ ಓದುತ್ತಿರುವ ವೇಳೆ ತಪ್ಪಾಗಿ ಥಳಿಸಿದ್ದಾರೆ ಎಂದು ವಿದ್ಯಾರ್ಥಿಯ ಕುಟುಂಬ ಆರೋಪಿಸಿದೆ.

ಈ ಸಂಬಂಧ ಶಿಕ್ಷಕಿ ಸ್ಪಷನೆ ಕೂಡಾ ನೀಡಿದ್ದರು. ತಾವು ಯಾವುದೇ ದುರುದ್ದೇಶದಿಂದ ಹಾಗೆ ಮಾಡಿಲ್ಲ. ತಾವು ದೈಹಿಕ ನೂನ್ಯತೆ ಹೊಂದಿದ್ದರಿಂದ ವಿದ್ಯಾರ್ಥಿಗಳ ಕಡೆಯಿಂದ ಕಪಾಳಕ್ಕೆ ಹೊಡೆಸಿದ್ದೆ. ನಮ್ಮ ವಿರುದ್ಧ ದುರುದ್ದೇಶಪೂರ್ವಕವಾಗಿ ಆರೋಪ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ:ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ವಿಡಿಯೋ ವೈರಲ್​: ದ್ವೇಷ ಹರಡಲು ಬಿಜೆಪಿ ಕಾರಣ ಎಂದ ರಾಹುಲ್, ಪ್ರಿಯಾಂಕಾ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ನೊಟೀಸ್​ನಲ್ಲೇನಿದೆ?:ಘಟನೆಯ ವಿಡಿಯೋ ಆಗಸ್ಟ್ 25ರಂದು ಭಾರಿ ವೈರಲ್ ಆಗಿದೆ. ಇದಾದ ಬಳಿಕ ಶಾಲೆ ಶಿಕ್ಷಕಿ ಹಾಗೂ ಶಾಲೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿತ್ತು. ಮಾಧ್ಯಮಗಳ ವರದಿಯಲ್ಲಿನ ಅಂಶಗಳನ್ನು ಪರಿಗಣಿಸಲಾಗಿದೆ. ಇದರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗಿರುವುದನ್ನು ಆಯೋಗ ಪತ್ತೆ ಹಚ್ಚಿದೆ. ಈ ಕುರಿತು ಆಯೋಗವು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.

ಉತ್ತರ ಪ್ರದೇಶ ಸರ್ಕಾರಕ್ಕೆ ನೊಟೀಸ್ ನೀಡಿದ ನಂತರ, ನಾಲ್ಕು ವಾರಗಳಲ್ಲಿ ವಿವರವಾದ ವರದಿಯನ್ನು ಕೇಳಲಾಗಿದೆ. ಶಿಕ್ಷಕಿ ವಿರುದ್ಧ ತೆಗೆದುಕೊಂಡ ಕ್ರಮ ಮತ್ತು ಪ್ರಕರಣದಲ್ಲಿ ದಾಖಲಾದ ಎಫ್‌ಐಆರ್‌ನ ಸ್ಥಿತಿಗತಿ ಹಾಗೂ ಸಂತ್ರಸ್ತ ಕುಟುಂಬಕ್ಕೆ ಪಾವತಿಸಿದ ಪರಿಹಾರ ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಪ್ರಸ್ತಾವನೆಗಳಿಗೆ ಉತ್ತರ ನೀಡುವಂತೆ ನೋಟಿಸ್​​ನಲ್ಲಿ ನಮೂದಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಕಪಾಳಮೋಕ್ಷ ಮಾಡಿದ ತಾಯಿ ವಿರುದ್ಧ ದೂರು ನೀಡಲು ಠಾಣೆಗೆ ಬಂದ ಮಗು..!

Last Updated : Aug 30, 2023, 10:45 AM IST

ABOUT THE AUTHOR

...view details