ನವ ದೆಹಲಿ:ಮಹಾಮಾರಿ ಕೋವಿಡ್ ವೈರಸ್ ಜನಜೀವನದ ಮೇಲೆ ಎಷ್ಟರಮಟ್ಟಿಗೆ ತನ್ನ ಅಟ್ಟಹಾಸ ಮೆರೆದಿತ್ತೋ ಇದೀಗ ಅಷ್ಟೇ ಪ್ರಮಾಣದಲ್ಲಿ ಪ್ರಕರಣಗಳು ಇಳಿಮುಖಗೊಂಡಿವೆ. ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 291 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳು 4,767 ಕ್ಕೆ ಇಳಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ - ಕೋವಿಡ್ ಪ್ರಕರಣ
ದೇಶದಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖಗೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ ಹೆಚ್ಚುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ
ಕೇರಳದ ಎರಡು ಸಾವು ಪ್ರಕರಣಗಳೊಂದಿಗೆ ಈವರೆಗೆ 5,30,622 ಮಂದಿ ಅಸುನೀಗಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು 98.80 ರಷ್ಟಿದೆ. ಕಾಯಿಲೆಯಿಂದ ಚೇತರಿಸಿಕೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಸಾವು ಪ್ರಮಾಣ ಶೇ 1.19 ದಾಖಲಾಗಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 219.92 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ:48,500 ವರ್ಷದ ಹಿಂದಿನ ಜೊಂಬಿ ವೈರಸ್ ಪತ್ತೆ ಮಾಡಿದ ರಷ್ಯಾ ವಿಜ್ಞಾನಿಗಳು