ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 5,221 ಹೊಸ ಕೋವಿಡ್-19 ಕೇಸ್‌ಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 47,176ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ಕೇರಳದಲ್ಲಿ ಸಂಭವಿಸಿದ ನಾಲ್ಕು ಸಾವು ಸೇರಿದಂತೆ ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರಲ್ಲಿ 0.11 ಪ್ರತಿಶತ ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71 ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಸಂಖ್ಯೆ ಇಳಿಕೆ; 5 ಸಾವಿರ ಹೊಸ ಸೋಂಕಿತರು ಪತ್ತೆ - ಕೋವಿಡ್ ಪ್ರಕರಣ
ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳ ವಿವರ ಹೀಗಿದೆ.
5221 ಹೊಸ ಪ್ರಕರಣ ಪತ್ತೆ