ಕೋಲ್ಕತ್ತಾ (ಪಶ್ಚಿಮ ಬಂಗಾಳ):ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಮೊದಲ ಬಾರಿಗೆ ತನ್ನ ಮಗುವಿನ ತಂದೆಯ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ.
ಕಳೆದ ನವೆಂಬರ್ನಲ್ಲಿ ಪತಿಯಿಂದ ಬೇರೆಯಾಗಿದ್ದ ನಟಿ, ಆಗಸ್ಟ್ 26 ರಂದು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜನಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಹಾಗೇ ಮಗುವಿನ ತಂದೆಯ ಬಗ್ಗೆಯೂ ಮಾತನಾಡಿದ್ದಾರೆ.
ನಿನ್ನೆ ನುಸ್ರುತ್, ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಅವರಾಗಿಯೇ ಮಗುವಿನ ತಂದೆ ಬಗ್ಗೆ ಮಾತನಾಡಿದ್ದಾರೆ. ‘ನಿಮ್ಮ ಮಗುವನ್ನು ಸಾರ್ವಜನಿಕವಾಗಿ ತೋರಿಸುತ್ತೀರಿ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಶ್ನೆಯನ್ನು ನನ್ನ ಮಗುವಿನ ತಂದೆಯ ಬಳಿಯೇ ಕೇಳಬೇಕು. ಏಕೆಂದರೆ ಈ ಸಮಯದಲ್ಲಿ ಅವರು ಹೊರಗಿನ ಯಾರಿಗೂ ಮಗುವನ್ನು ನೋಡಲು ಬಿಡುತ್ತಿಲ್ಲ ಎಂದು ಹೇಳಿದರು.