ಪಾರಾದೀಪ್/ಒಡಿಶಾ: ಇಂದು ಬೆಳಗ್ಗೆ ಲಕ್ಷ್ಮೀನಾರಾಯಣ್ ಸಿಗಡಿ ಸಂಸ್ಕರಣಾ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆಯಾದ ಘಟನೆ ನಡೆದಿದೆ.
ಸಿಗಡಿ ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ: ಮೂವರ ಸ್ಥಿತಿ ಗಂಭೀರ - ಲಕ್ಷ್ಮೀನಾರಾಯಣ್ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ
ಒಡಿಶಾದ ಪಾರಾದೀಪದಲ್ಲಿರುವ ಲಕ್ಷ್ಮೀನಾರಾಯಣ್ ಸಿಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಕಾರ್ಖಾನೆಯ ಮೂವರು ಮಹಿಳಾ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ.
ಅಮೋನಿಯಾ ಅನಿಲ ಸೋರಿಕೆಯಾದ ಹಿನ್ನೆಲೆ ಸೀಗಡಿ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಮಹಿಳಾ ಕಾರ್ಮಿಕರು ಉಸಿರಾಟ ತೊಂದರೆಯಿಂದ ಪ್ರಜ್ಞೆ ತಪ್ಪಿದ್ದಾರೆ. ಕಾರ್ಖಾನೆಯ ಸಿಬ್ಬಂದಿ ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಮಹಿಳಾ ಕಾರ್ಮಿಕರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಅವರನ್ನು ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ಪೊಲೀಸರು ಮತ್ತು ತಾಂತ್ರಿಕ ತಜ್ಞರ ತಂಡವು ಘಟನಾ ಸ್ಥಳಕ್ಕೆ ತೆರಳಿ ಈ ಬಗ್ಗೆ ತನಿಖೆ ನಡೆಸಿತು. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ, ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಈ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗ್ತಿದೆ.