ಕರ್ನಾಟಕ

karnataka

ETV Bharat / bharat

ಮೆಟ್ರಿಕ್ ಪರೀಕ್ಷಾ ಶುಲ್ಕ ಮನ್ನಾ ಮಾಡಿ ಒಡಿಶಾ ಸಿಎಂ ಆದೇಶ: 6 ಲಕ್ಷ ವಿದ್ಯಾರ್ಥಿಗಳಿಗೆ ಲಾಭ

ಒಡಿಶಾ ರಾಜ್ಯದಲ್ಲಿನ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅಲ್ಲಿನ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಮೆಟ್ರಿಕ್​ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿದೆ.

Odisha CM Naveen Patnaik
Odisha CM Naveen Patnaik

By

Published : Jan 12, 2021, 8:35 PM IST

ಭುವನೇಶ್ವರ (ಒಡಿಶಾ):ದೇಶದ ವಿವಿಧ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳು​ ಪುನಾರಂಭಗೊಳ್ಳುತ್ತಿವೆ. ಇದರ ಬೆನ್ನಲ್ಲೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಹತ್ವದ ಆದೇಶ ಹೊರಹಾಕಿದ್ದಾರೆ.

ಇದನ್ನೂ ಓದಿ: 64.98 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿದ ಒಡಿಶಾ ಸಿಎಂ

ಒಡಿಶಾದಲ್ಲಿನ ಮೆಟ್ರಿಕ್​ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿ ಆದೇಶ ಹೊರಡಿಸಿದ್ದು, ಇದರಿಂದ 6 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ. ಮೆಟ್ರಿಕ್ಯುಲೇಷನ್​ ಪರೀಕ್ಷೆಗಳು ಹಾಗೂ ವಾರ್ಷಿಕ ಪ್ರೌಢ ಶಾಲಾ ಪ್ರಮಾಣಪತ್ರ(ಎಚ್​ಎಸ್​ಬಿ) ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಈ ಆದೇಶ ಅನ್ವಯವಾಗಲಿದೆ.

ರಾಜ್ಯ ಶಿಕ್ಷಣ ಮಂಡಳಿ ಇದಕ್ಕೆ ಸಂಬಂಧಿಸಿದಂತೆ ತಕ್ಷಣವೇ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳುಹಿಸಲಿದೆ ಎಂದು ನವೀನ್​ ಪಟ್ನಾಯಕ್​ ತಿಳಿಸಿದ್ದಾರೆ.

ABOUT THE AUTHOR

...view details