ಭುವನೇಶ್ವರ (ಒಡಿಶಾ): ರಾಜ್ಯದಲ್ಲಿ ಕಾಡ್ಗಿಚ್ಚು ಹೆಚ್ಚುತ್ತಿರುವ ಕಾರಣದಿಂದ ಒಡಿಶಾ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲಾ ಕ್ಷೇತ್ರ ಅರಣ್ಯ ಅಧಿಕಾರಿಗಳ ರಜಾ-ದಿನಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.
ಈಗಾಗಲೇ ಕಾಡ್ಗಿಚ್ಚಿಗೆ ಸಂಬಂಧಿಸಿದಂತೆ ಒಡಿಶಾದ ಬಿಜೆಪಿ ನಿಯೋಗ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿ ಮಾಡಿದ್ದು, ವಿಶೇಷವಾಗಿ ಸಿಮ್ಲಿಪಾಲ್ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚನ್ನು ಉಲ್ಲೇಖಿಸಿದೆ.