ಒಡಿಶಾ:ರಾಜ್ಯದಲ್ಲಿ ಕೊರೊನಾ ಪ್ರಕರಣ ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಮೇ 5 ರಿಂದ ಮೇ 16 ರವರೆಗೆ 14 ದಿನಗಳ ಕಾಲ ಲಾಕ್ಡೌನ್ ಘೋಷಿಸಿದೆ.
14 ದಿನಗಳ ಲಾಕ್ಡೌನ್ ಘೋಷಿಸಿದ ಒಡಿಶಾ - ಒಡಿಶಾ ಇತ್ತೀಚಿನ ಸುದ್ದಿ
ಮೇ 5 ರಿಂದ ಮೇ 16 ರವರೆಗೆ 14 ದಿನಗಳ ಕಾಲ ಲಾಕ್ಡೌನ್ ಘೋಷಿಸಿ ಒಡಿಶಾ ಸರ್ಕಾರ ಆದೇಶಿಸಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ನಿಯಂತ್ರಣಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ಒಡಿಶಾ
ಲಾಕ್ಡೌನ್ ಸಮಯದಲ್ಲಿ ಆರೋಗ್ಯ ರಕ್ಷಣೆ ಅಥವಾ ಇತರ ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಇನ್ನು 500 ಮೀ. ವ್ಯಾಪ್ತಿಯಲ್ಲಿ ತೆರಳಿ ಅಗತ್ಯ ವಸ್ತುಗಳ ಖರೀದಿಸಲು ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಕಳೆದ 24 ಗಂಟೆಯಲ್ಲಿ 18,015 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 4,62, 622ಕ್ಕೆ ಏರಿಕೆಯಾಗಿದೆ.