ಹಿಸಾರ್ (ಹರಿಯಾಣ): ಒಡಿಶಾ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಐವರು ಕಾಮುಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿ, ಬಲೆ ಬೀಸಿದ್ದಾರೆ.
ಪ್ರಕರಣದ ವಿವರ:
ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ಆಕೆ 2020ರ ಮಾರ್ಚ್ ತಿಂಗಳಲ್ಲಿ ಗೆಳತಿ ಜಮೀನಾಳನ್ನು ಭೇಟಿಯಾಗಲು ಹರಿಯಾಣದ ಹಿಸ್ಸಾರ್ ಬಂದಿದ್ದಾಳೆ. ಈ ವೇಳೆ ಯುವತಿಯನ್ನು ದುರುಳರು ಅಪಹರಿಸಿದ್ದರು. ಬಳಿಕ ಆಕೆಯನ್ನು ರಾಜ್ಯದ ವಿವಿಧ ಕಡೆ ಕರೆದುಕೊಂಡು ಹೋಗಿದ್ದಾರೆ. ಹೀಗೆ ವಿವಿಧ ಪ್ರದೇಶಗಳಲ್ಲಿ ಬೆದರಿಕೆ ಹಾಕಿ ಆಕೆಯ ಮೇಲೆ ನಿರಂತರವಾಗಿ 6 ತಿಂಗಳ ಕಾಲ ಅತ್ಯಾಚಾರ ಮಾಡಿದ್ದಾರೆ.