ಭಿವಾನಿ (ಹರಿಯಾಣ): ನರ್ನಾಲ್ ಜಿಲ್ಲೆಯ ಸ್ಥಳೀಯರು ನಿರ್ಮಿಸಿದ್ದ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ದೇವಾಲಯವನ್ನು ಪುರಸಭೆ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ.
ಮುನ್ಸಿಪಲ್ ಕೌನ್ಸಿಲ್ ಅಧಿಕಾರಿ ಅಭಯ್ ಯಾದವ್ ನೇತೃತ್ವದಲ್ಲಿ ಪೊಲೀಸ್ ಭದ್ರತೆಯ ನಡುವೆ ದೇವಾಲಯವನ್ನು ನೆಲಸಮಗೊಳಿಸಿದ್ದು, ದೇವಾಲದೊಳಗಿದ್ದ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ಮೂರ್ತಿಯನ್ನ ವಶಕ್ಕೆ ಪಡೆದಿದ್ದಾರೆ.