ನವದೆಹಲಿ:ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸಿಲುಕಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್, ದೆಹಲಿಯ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಇಂದು ದೆಹಲಿಯ ರೋಹಿಣಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಕುಸ್ತಿಪಟು ಸಾಗರ್ ರಾಣಾ, ದೆಹಲಿಯ ಛತ್ರಸಾಲ ಸ್ಟೇಡಿಯಂನಲ್ಲಿ ತರಬೇತಿಗೆ ತೆರಳಿದ್ದಾಗ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿದ್ದಂತೆಯೇ ಸುಶೀಲ್ ಕುಮಾರ್ ಪರಾರಿಯಾಗಿದ್ದಾರೆ.