ಶ್ರೀನಗರ(ಜಮ್ಮು):ಜಮ್ಮು-ಕಾಶ್ಮೀರ ಬ್ಯಾಂಕ್ನಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೊಳಪಡಿಸಿದೆ. ಇದೇ ಕಾರಣಕ್ಕಾಗಿ ಅವರು ದೆಹಲಿಗೆ ಆಗಮಿಸಿದ್ದು, ವಿಚಾರಣೆಗೊಳಪಟ್ಟಿದ್ದಾರೆಂದು ಸುದ್ದಿಸಂಸ್ಥೆವೊಂದು ವರದಿ ಪ್ರಕಟಿಸಿದೆ.
ಜಮ್ಮು-ಕಾಶ್ಮೀರ ಬ್ಯಾಂಕ್‌ನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) 2021ರಲ್ಲಿ ಬ್ಯಾಂಕ್ನ ಮಾಜಿ ಅಧ್ಯಕ್ಷ ಮುಷ್ತಾಕ್ ಅಹ್ಮದ್ ಶೇಖ್ ಮತ್ತು ಇತರರ ವಿರುದ್ಧ ಸಾಲ ಹಾಗೂ ಹೂಡಿಕೆಗಳ ಮಂಜೂರಾತಿಯಲ್ಲಿ ಅಕ್ರಮಗಳ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿತ್ತು. ಬ್ಯಾಂಕ್ನಲ್ಲಿ 180 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿತ್ತು.