ನವದೆಹಲಿ:ಮಹಾಮಾರಿ ಕೊರೊನಾ ವೈರಸ್ನ ರೂಪಾಂತರ ತಳಿ ಒಮಿಕ್ರೋನ್ ಕರ್ನಾಟಕದ ಮೂಲಕ ಭಾರತಕ್ಕೂ ಲಗ್ಗೆ ಹಾಕಿದೆ. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್, ಕರ್ನಾಟಕದ ಬೆಂಗಳೂರಿನಲ್ಲಿ ಎರಡು ರೂಪಾಂತರ ಕೇಸ್ ಪತ್ತೆಯಾಗಿರುವುದಾಗಿ ತಿಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿರುವ 66 ಹಾಗೂ 46 ವರ್ಷದ ವ್ಯಕ್ತಿಗಳಲ್ಲಿ ರೂಪಾಂತರ ಸೋಂಕು ಕಾಣಿಸಿಕೊಂಡಿದೆ. ಇದೇ ವಿಚಾರವಾಗಿ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಇಲಾಖೆ, ಹೊಸ ರೂಪಾಂತರದಿಂದ ಜನರು ಆತಂಕಕ್ಕೊಳಗಾಗುವ ಅವಶ್ಯಕತೆ ಇಲ್ಲ ಎಂದಿದೆ. ಹೊಸ ವೈರಸ್ ಕಾಣಿಸಿಕೊಂಡವರಿಗೆ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಕ್ವಾರಂಟೈನ್ಗೊಳಪಡಿಸಲಾಗಿದೆ. ಹೀಗಾಗಿ ಯಾವುದೇ ರೀತಿಯಲ್ಲೂ ಹೆದರುವ ಅಗತ್ಯವಿಲ್ಲ ಎಂದಿದೆ.