ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 781ಕ್ಕೆ ಏರಿಕೆ

Omicron cases in India: ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 781ಕ್ಕೇರಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 241 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

By

Published : Dec 29, 2021, 10:35 AM IST

ನವದೆಹಲಿ:ದೇಶದಲ್ಲಿ ದಿನೇ ದಿನೇ ರೂಪಾಂತರಿ ಒಮಿಕ್ರಾನ್​​ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬುಧವಾರ 129 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 781ಕ್ಕೆ ಏರಿಕೆಯಾಗಿದೆ.

ಮಂಗಳವಾರ 653 ಒಮಿಕ್ರಾನ್​​ ಪ್ರಕರಣಗಳು ಪತ್ತೆಯಾಗಿದ್ದವು. ಇಂದು ಪತ್ತೆಯಾದ 781 ಜನರಲ್ಲಿ 241 ಜನರು ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,195 ಹೊಸ ಕೋವಿಡ್​​ ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 34,808,886 ಇದೆ. ಮಂಗಳವಾರ 302 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,80,592ಕ್ಕೆ ಏರಿದೆ.

ದೇಶದಲ್ಲಿ 77,002 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ಚೇತರಿಕೆ ದರ ಶೇ.98.40 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 7,347 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 3,42,51,292 ಮಂದಿ ಚೇತರಿಸಿಕೊಂಡಿದ್ದಾರೆ. ಪಾಸಿಟಿವಿಟಿ ದರ ಶೇ. 0.79 ರಷ್ಟಿದೆ.

ರಾಜ್ಯವಾರು ಒಮಿಕ್ರಾನ್​​ ಪ್ರಕರಣಗಳ ಮಾಹಿತಿ ಹೀಗಿದೆ..


143.15 ಕೋಟಿ ವ್ಯಾಕ್ಸಿನೇಷನ್:

ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 143.15 (1,43,15,35,641)ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಜತೆಗೆ ಇಲ್ಲಿಯವರೆಗೆ 67.52 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

ಇದನ್ನೂ ಓದಿ:7.4 ಕೋಟಿ 15-18 ವರ್ಷದ ಮಕ್ಕಳಿಗೆ ಜನವರಿ 3 ರಿಂದ COVAXIN ಲಸಿಕೆ

ABOUT THE AUTHOR

...view details