ಅಶೋಕನಗರ (ಮಧ್ಯಪ್ರದೇಶ) :ಕೌಟುಂಬಿಕ ಕಲಹದಲ್ಲಿ ವ್ಯಕ್ತಿಯೊಬ್ಬರು ತಮ್ಮ ಮಗ, ಸೊಸೆ, ಮೊಮ್ಮಗನಿಗೆ ನಿರ್ದಯವಾಗಿ ದೊಣ್ಣೆಯಿಂದ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.