ಪಾಟ್ನಾ(ಬಿಹಾರ):ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ಆರೋಗ್ಯವನ್ನು ಕಾಪಾಡಿಕೊಳ್ಳುವ ದೃಷ್ಟಿಯಿಂದ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ವರ್ಕೌಟ್ ಆರಂಭಿಸಿದ್ದಾರೆ. ಇತ್ತೀಚೆಗೆ ಅವರು ಕ್ರಿಕೆಟ್ ಆಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಕಳೆದ ಎರಡು ವಾರಗಳಲ್ಲಿ ಬಿಹಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ತಮ್ಮ ಫಿಟ್‌ನೆಸ್ ವರ್ಕೌಟ್ ವಿಡಿಯೋವನ್ನು ಮತ್ತೆ ಎರಡನೇ ಬಾರಿಗೆ ಹಂಚಿಕೊಂಡಿದ್ದಾರೆ.
ತೂಕ ಇಳಿಸಿಕೊಳ್ಳಲು ಪ್ರಧಾನಿ ಮೋದಿಯವರು ಸಲಹೆ ನೀಡಿದ ನಂತರ ತೇಜಸ್ವಿ ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಲು ಪ್ರಾರಂಭಿಸಿದ್ದಾರೆ ಎಂದು ಅವರ ನಿಕಟ ಮೂಲಗಳು ತಿಳಿಸಿವೆ. ಕೆಲವು ದಿನಗಳ ಹಿಂದೆ, ತೇಜಸ್ವಿ ಯಾದವ್ ಕ್ರಿಕೆಟ್ ಆಡುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿ ಜುಲೈ 12 ರಂದು ಬಿಹಾರ ವಿಧಾನಸಭೆಯ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲು ಪಾಟ್ನಾಗೆ ಬಂದಿದ್ದರು. ಈ ವೇಳೆ ಸಭೆಯಲ್ಲಿ ಇಬ್ಬರೂ ಆರೋಗ್ಯದ ಕುರಿತು ಮಾತುಕತೆ ನಡೆಸಿದ್ದಾರೆ. ಈ ಸಂಭಾಷಣೆಯ ಸಮಯದಲ್ಲಿ, ಪ್ರಧಾನಿ ಅವರು ತೇಜಸ್ವಿಗೆ ಸ್ವಲ್ಪ ತೂಕ ಇಳಿಸಿಕೊಳ್ಳಲು ಸಲಹೆ ನೀಡಿದ್ರಂತೆ.