ಪಹಲ್ಗಾಮ್(ಜಮ್ಮು ಕಾಶ್ಮೀರ): ಇತ್ತೀಚೆಗೆ ಪಹಲ್ಗಾಮ್ನಲ್ಲಿ ಬಾಲಿವುಡ್ ಚಿತ್ರ ತಂಡದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೆ.18 ರಂದು ನಗರದಲ್ಲಿ ನಟ ಇಮ್ರಾನ್ ಹಶ್ಮಿ ಅಭಿನಯದ ಗ್ರೌಂಡ್ ಜೀರೋ ಚಿತ್ರದ ಚಿತ್ರೀಕರಣದ ವೇಳೆ ಸಂಜೆ 7.15ರ ಸುಮಾರಿಗೆ ಇಮ್ರಾನ್ ಹಶ್ಮಿ ಮತ್ತು ಚಿತ್ರತಂಡದ ಮೇಲೆ ಕಲ್ಲು ತೂರಾಟ ನಡೆದಿತ್ತು. ಈ ಕುರಿತು ಪಹಲ್ಗಾಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.