ಗುವಾಹಟಿ (ಅಸ್ಸೋಂ): ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) ಓದುತ್ತಿದ್ದ ಬಿಟೆಕ್ ವಿದ್ಯಾರ್ಥಿ ಹಾಸ್ಟೆಲ್ ಕೊಠಡಿಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿಯನ್ನು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗುಡ್ಲ ಮಹೇಶ್ ಸಾಯಿರಾಜ್(20) ಎಂದು ಗುರುತಿಸಲಾಗಿದೆ.
ಇಲ್ಲಿನ ಲೋಹಿತ್ ಹಾಸ್ಟೆಲ್‌ನ ಸಿ-314 ಕೊಠಡಿಯಲ್ಲಿ ವಾಸವಿದ್ದ ವಿದ್ಯಾರ್ಥಿ, ಅದೇ ಹಾಸ್ಟೆಲ್‌ನ ಕೊಠಡಿ ಸಂಖ್ಯೆ ಡಿ-360ಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.