ಕಣ್ಣೂರು(ಕೇರಳ): ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ವಚ್ಛಗೊಳಿಸುವ ಸಿಬ್ಬಂದಿಗೆ ಅಚ್ಚರಿಯೊಂದು ಕಾದಿತ್ತು. ಡಸ್ಟ್ಬಿನ್ನಲ್ಲಿ ಅಡಗಿಸಿಟ್ಟಿದ್ದ ಒಂದು ಕೋಟಿ ರೂ.ಮೌಲ್ಯದ ಚಿನ್ನ ಕೈಗೆ ಸಿಕ್ಕಿದೆ. ಇದನ್ನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಏರ್ಪೋರ್ಟ್ ಸ್ವಚ್ಛಗೊಳಿಸುವ ವೇಳೆ ಡಸ್ಟ್ಬಿನ್ನಲ್ಲಿ ಚಿನ್ನದ ಗಟ್ಟಿ ಕಂಡು ಬಂದಿದೆ. ಈ ಬಗ್ಗೆ ಅಲ್ಲಿನ ಸಿಬ್ಬಂದಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಚಿನ್ನವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದಾರೆ.