ನವದೆಹಲಿ: ಇಲ್ಲಿನ ರೋಹಿಣಿ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಸಾವಿಗೀಡಾಗಿದ್ದಾನೆ. ಕನಿಷ್ಠ ಆರು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 5, ಪೂತ್ ಕಲಾನ್‌ನಲ್ಲಿರುವ ಕಟ್ಟಡದಲ್ಲಿ ಮಧ್ಯಾಹ್ನ 3.57ಕ್ಕೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಲಭಿಸಿತ್ತು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ತು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು ಸಂಜೆ 6.45 ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಕಟ್ಟಡವು ನೆಲಮಾಳಿಗೆ, ನೆಲ ಮಹಡಿ ಮತ್ತು ನಾಲ್ಕು ಮೇಲಿನ ಮಹಡಿಗಳನ್ನು ಒಳಗೊಂಡಿದೆ.