ಮುಂಬೈ(ಮಹಾರಾಷ್ಟ್ರ):ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಂಬೈ ಶಾಖೆಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ನುಗ್ಗಿದ್ದ ಇಬ್ಬರು ಮುಸುಕುದಾರಿಗಳು ಗುಂಡು ಹಾರಿಸಿ, ಓರ್ವ ಉದ್ಯೋಗಿಯನ್ನ ಕೊಲೆ ಮಾಡಿ, ಎರಡೂವರೆ ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಪ್ರಕರಣ ಬೆನ್ನತ್ತಿದ ಪೊಲೀಸರು ಕೇವಲ 8 ಗಂಟೆಯಲ್ಲಿ ಆರೋಪಿಗಳ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಮುಂಬೈನ ದಹಿಸರ್ನ ಎಸ್ಬಿಐ ಬ್ಯಾಂಕ್ನಲ್ಲಿ ದರೋಡೆ ಮಾಡಿದ್ದ ಆರೋಪಿಗಳು ಗುಂಡು ಹಾರಿಸಿದ್ದರಿಂದ ಓರ್ವ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಾಯಗೊಂಡಿದ್ದನು. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ನೊಳಗೆ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ಶೋಧ ನಡೆಸಿದ್ದರು.
ಪ್ರಕರಣ ಭೇದಿಸುವ ಉದ್ದೇಶದಿಂದ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 8 ತಂಡ ರಚನೆ ಮಾಡಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಸಹಾಯದಿಂದ ಇದೀಗ ಅವರನ್ನ ಬಂಧನ ಮಾಡಲಾಗಿದ್ದು, ವಿಚಾರಣೆಗೊಳಪಡಿಸಲಾಗಿದೆ.