ಗುವಾಹಟಿ :ಕಾಜಿರಂಗಾ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಮೀಸಲು ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರಾಯಲ್ ಬಂಗಾಳದ ಹುಲಿ ಸಾವನ್ನಪ್ಪಿದೆ. ಸತ್ತ ಹುಲಿಯ ಮರಣೋತ್ತರ ಪರೀಕ್ಷೆಯಲ್ಲಿ ಶ್ವಾಸಕೋಶ ಮತ್ತು ಹೃದಯದಲ್ಲಿ ಗುಂಡು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಇನ್ನು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಡೆಸಿದ ಘಟನೆಯ ತನಿಖೆಯಲ್ಲಿ ಗುಂಡಿನ ದಾಳಿ ಅನಗತ್ಯವಾಗಿ ನಡೆದಿದೆ ಎಂದು ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.