ಕುಲ್ಗಾಂ( ಜಮ್ಮು ಕಾಶ್ಮೀರ): ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದೆ. ಈ ನಡುವೆ ಉಗ್ರರು ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕಾಶ್ಮೀರೇತರರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗುತ್ತಿದೆ.
ಈ ನಡುವೆ ಭಾರತೀಯ ಸೇನೆ ಅಡಗಿ ಕುಳಿತಿರುವ ಉಗ್ರರರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿದೆ. ಕುಲ್ಗಾಮ್ನಲ್ಲಿ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಈ ನಡುವೆ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ವೇಳೆ, ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ.