ಕರ್ನಾಟಕ

karnataka

ETV Bharat / bharat

One nation one election: ಒಂದು ರಾಷ್ಟ್ರ ಒಂದು ಚುನಾವಣೆ.. ಸಮಿತಿ ರಚಿಸಿದ ಮರುದಿನವೇ ಕೆಲಸ ಶುರು, ಸಭೆ ನಡೆಸಿ ಅಧ್ಯಕ್ಷ ಕೋವಿಂದ್​ಗೆ ಮಾಹಿತಿ - top law ministry officials brief panel

ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ನಿರ್ಧರಿಸಲು ಒಂದು ದಿನದ ಹಿಂದೆ(ಆಗಸ್ಟ್​ 2) ರಚಿಸಲಾಗಿರುವ ಸಮಿತಿ ಒಂದು ದಿನದಲ್ಲೇ ಕಾರ್ಯಾರಂಭ ಮಾಡಿದೆ. ಕಾನೂನು ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸಭೆ ನಡೆಸಿ ಈ ಬಗ್ಗೆ ಅಧ್ಯಕ್ಷ ರಾಮನಾಥ್​ ಕೋವಿಂದ್​ ಅವರಿಗೆ ಮಾಹಿತಿ ನೀಡಿದೆ.

ಒಂದು ರಾಷ್ಟ್ರ ಒಂದು ಚುನಾವಣೆ
ಒಂದು ರಾಷ್ಟ್ರ ಒಂದು ಚುನಾವಣೆ

By ETV Bharat Karnataka Team

Published : Sep 3, 2023, 9:39 PM IST

ನವದೆಹಲಿ:ಒಂದು ರಾಷ್ಟ್ರ ಒಂದು ಚುನಾವಣೆ ಸಾಧ್ಯತೆಯ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ನೇತೃತ್ವದ ಉನ್ನತ ಮಟ್ಟಸ ಸಮಿತಿಯು ತನ್ನ ಕಾರ್ಯ ಆರಂಭಿಸಿದೆ. ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ಅದರ ಮಾಹಿತಿಯನ್ನು ಅಧ್ಯಕ್ಷ ರಾಮನಾಥ್​ ಕೋವಿಂದ್​ ಅವರಿಗೆ ನೀಡಿದ್ದಾರೆ.

ಕಾನೂನು ಇಲಾಖೆ ಕಾರ್ಯದರ್ಶಿ ನಿತೇನ್ ಚಂದ್ರ, ಶಾಸಕಾಂಗ ಕಾರ್ಯದರ್ಶಿ ರೀಟಾ ವಶಿಷ್ಟ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾನುವಾರ ಪೂರ್ವ ಸಿದ್ಧತಾ ಸಭೆ ನಡೆಸಿದ್ದಾರೆ. ಬಳಿಕ ಕೋವಿಂದ್ ಅವರನ್ನು ಭೇಟಿ ಮಾಡಿ ಇದರ ವಿವರಗಳನ್ನು ನೀಡಿದ್ದಾರೆ.

ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತಿಗಳಿಗೆ ಚುನಾವಣೆ ನಡೆಸುವ ಸಾಧ್ಯತೆಯ ಕುರಿತು ಅಧ್ಯಯನಕ್ಕೆ ಮಾಜಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್ ಅವರ ನೇತೃತ್ವದಲ್ಲಿ 8 ಸದಸ್ಯರುಳ್ಳ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದೆ. ಇದರಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಮತ್ತು ಮಾಜಿ ಹಣಕಾಸು ಆಯೋಗದ ಅಧ್ಯಕ್ಷ ಎನ್‌ ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಕೂಡ ಸದಸ್ಯರಾಗಿದ್ದಾರೆ.

ಸಮಿತಿಯಿಂದ ಕಾಂಗ್ರೆಸ್​ ಔಟ್​:ಉನ್ನತ ಮಟ್ಟದ ಸಮಿತಿಯಲ್ಲಿ ಲೋಕಸಭೆ ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಅವರನ್ನು ಸೇರಿಸಿಕೊಳ್ಳಲಾಗಿತ್ತು. ಆದರೆ, ಏಕಚುನಾವಣೆಯನ್ನು ತಮ್ಮ ಪಕ್ಷ ವಿರೋಧಿಸಿದ್ದು, ಸಮಿತಿಯಿಂದ ಹೊರಬರುವುದಾಗಿ ತಿಳಿಸಿದೆ. ಈ ಬಗ್ಗೆ ಗೃಹ ಸಚಿವ ಅಮಿತ್​ ಶಾ ಅವರಿಗೆ ಪತ್ರ ಬರೆದಿರುವ ಅಧಿರ್ ರಂಜನ್ ಚೌಧರಿ ಅವರು, 'ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯಲ್ಲಿ ನಾನು ಇರುವುದಿಲ್ಲ. ಇದೆಲ್ಲವೂ ದೊಡ್ಡ ವಂಚನೆಯಾಗಿದೆ. ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸ್ಥಾನ ನೀಡದೇ ಇರುವುದು ದೊಡ್ಡ ಅವಮಾನ. ಇದು ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಮಾಡಿದ ಅಗೌರವ. ಹೀಗಾಗಿ, ನಾನು ಸಮಿತಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ರಾಹುಲ್​, ಕೇಜ್ರಿವಾಲ್​ ಟೀಕೆ :ಸಂಸತ್ತು ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಅಧ್ಯಯನ ನಡೆಸಲು ಕೇಂದ್ರ ರಚಿಸಿರುವ ಸಮಿತಿಯನ್ನು ಕಾಂಗ್ರೆಸ್, ಆಪ್​ ಸೇರಿದಂತೆ ವಿಪಕ್ಷಗಳು ಟೀಕಿಸಿವೆ. ಈ ಬಗ್ಗೆ ಎಕ್ಸ್​ನಲ್ಲಿ(ಹಿಂದಿನ ಟ್ವಿಟರ್​) ಬರೆದುಕೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಕೇಂದ್ರ ಸರ್ಕಾರದ ಈ ನಡೆ ಒಕ್ಕೂಟ ವ್ಯವಸ್ಥೆಯ ಮತ್ತು ಅದರ ಎಲ್ಲ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:One nation one election: 'ಒಂದು ರಾಷ್ಟ್ರ ಒಂದು ಚುನಾವಣೆ' ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ; ರಾಹುಲ್​ ಗಾಂಧಿ

ABOUT THE AUTHOR

...view details