ಮಂಡಿ (ಹಿಮಾಚಲ ಪ್ರದೇಶ):ಹಿಮಾಚಲ ಪ್ರದೇಶದಲ್ಲಿ ಗುರುವಾರ ಪಂಜಾಬ್ ರೋಡ್‌ವೇಸ್ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು 13 ಮಂದಿ ಗಾಯಗೊಂಡಿದ್ದಾರೆ. ಮಂಡಿ ಜಿಲ್ಲೆಯ ಔತ್ ಸುರಂಗ ಮಾರ್ಗದಲ್ಲಿ ಅಪಘಾತ ನಡೆದಿದೆ.
ಮನಾಲಿಗೆ ತೆರಳುತ್ತಿದ್ದ ಬಸ್ ಹಾಗೂ ಎದುರಿನಿಂದ ಬಂದ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು, 13 ಜನರು ಗಾಯಗೊಂಡಿದ್ದಾರೆ ಎಂದು ಮಂಡಿ ಪೊಲೀಸ್ ವರಿಷ್ಠಾಧಿಕಾರಿ ಶಾಲಿನಿ ಅಗ್ನಿಹೋತ್ರಿ ಮಾಹಿತಿ ನೀಡಿದ್ದಾರೆ.