ನವದೆಹಲಿ:ದೇಶದಲ್ಲಿ ಎರಡನೇ ಹಂತದ ಕೋವಿಡ್ ಅಲೆ ಜೋರಾಗಿದ್ದು, ದಿನದಿಂದ ದಿನಕ್ಕೆ ಏರುಗತಿಯುಲ್ಲಿ ತನ್ನ ಅಬ್ಬರ ಮುಂದುವರಿಸಿದೆ. ಇದರ ಮಧ್ಯೆ ದೆಹಲಿಯಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿ ಹೋಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ದೆಹಲಿಯಲ್ಲಿ ಇಲ್ಲಿಯವರೆಗೆ 4,200 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಪ್ರತಿ 20 ನಿಮಿಷಕ್ಕೆ ಒಬ್ಬನಿಗೆ ಮಹಾಮಾರಿ ಹರಡುತ್ತಿದೆ. ಕಳೆದ ಎರಡು ತಿಂಗಳಲ್ಲಿ ಸೋಂಕಿನಿಂದಲೇ 25 ಪೊಲೀಸರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಮಾರ್ಚ್ 2020ರಿಂದ ಇಲ್ಲಿಯವರೆಗೆ ದೆಹಲಿಯಲ್ಲಿ 59 ಪೊಲೀಸರು ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸ, ಮುಖ್ಯಮಂತ್ರಿ ಹಾಗೂ ವಿವಿಐಪಿ ಭದ್ರತಾ ಘಟಕದಲ್ಲಿನ 145 ಪೊಲೀಸರು ಸೋಂಕಿಗೊಳಗಾಗಿದ್ದಾರೆ.